ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರ ಕ್ಕೆ ಹೋಗುವುದಿಲ್ಲ ಅದೇ ರೀತಿ ಮಹಾರಾಷ್ಟ್ರದ ಒಂದಿಂಚೂ ಜಾಗ ಕರ್ನಾಟಕಕ್ಕೆ ಬರುವುದಿಲ್ಲ ಮಹಾರಾಷ್ಟ್ರದವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳನ್ನು ಕೊಡದಂತೆ ಮಹಾರಾಷ್ಟ್ರದ ನಮ್ಮ ಪಕ್ಷದ ಶಾಸಕರಿಗೆ ಹೇಳಿದ್ದೇನೆ. ನಮ್ಮ ರಾಜ್ಯದಲ್ಲಿ ಮರಾಠಿಗರು ಕನ್ನಡಿಗರ ಜೊತೆ ಹೊಂದಾಣಿಕೆಯಿಂದ ಇದ್ದಾರೆ. ಮಹಾರಾಷ್ಟ್ರ, ಸೊಲ್ಲಾಪುರ, ಸಾಂಗ್ಲಿ, ಕೊಲ್ಲಾಪುರದಲ್ಲಿ ಕನ್ನಡಿಗರು ಸಂತೋಷದಿಂದ ಇದ್ದಾರೆ, ಸಮಸ್ಯೆಗಳಿದ್ದರೆ ಆಯಾ ರಾಜ್ಯ ಸರ್ಕಾರಗಳ ಜೊತೆ ಮಾತನಾಡಿಕೊಳ್ಳಬೇಕು. ನಮ್ಮ ದೇಶ ಒಂದೇ. ನಾವು ಚೀನಾ, ಪಾಕಿಸ್ತಾನದ ಜೊತೆ ಹೋರಾಡಬೇಕು. ಅದರ ಬದಲಾಗಿ ಕರ್ನಾಟಕ, ಮಹಾರಾಷ್ಟ್ರ ಎಂದು ಬಡಿದಾಡುತ್ತಿರುವುದು ದೌರ್ಭಾಗ್ಯ ಎಂದರು.