ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಸರಣಿಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕುಸ್ತಿಪಟುಗಳನ್ನು ಭೇಟಿ ಮಾಡಿ ಇದಾದ ನಂತರವೂ ಚುನಾವಣಾ ನಡೆಯಲಿರುವ ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ. ಜಂತರ್ ಮಂತರ್‌ನಲ್ಲಿ ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರಂತಹ ಮಹಿಳಾ ಕುಸ್ತಿಪಟುಗಳೊಂದಿಗೆ ಸಂವಾದ ನಡೆಸಿದ್ದಾರೆ.ಏಳು ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ಮೇಲೆ ದೆಹಲಿ ಪೊಲೀಸರು ಶುಕ್ರವಾರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಈ ವೇಳೆ ಪೊಲೀಸರು ಎಫ್‌ಐಆರ್ ಪ್ರತಿಯನ್ನು ತೋರಿಸಬೇಕೆಂದು ಒತ್ತಾಯಿಸಿದ ಪ್ರಿಯಾಂಕಾ ಗಾಂಧಿ ಬಿಜೆಪಿ ನಾಯಕನ ವಿರುದ್ಧದ ಪ್ರತಿಭಟನೆಗಳು ಮತ್ತು ಆರೋಪಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಪ್ರತಿಕ್ರಿಯಿಸದ ಕಾರಣ ತನಗೆ ಅವರಿಂದ ಅಂತಹ ಯಾವುದೇ ‘ನಿರೀಕ್ಷೆ’ ಇಲ್ಲ ಎಂದು ಟೀಕಿಸಿದ್ದಾರೆ.