ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮೇ.10 ರಂದು ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನು ಮೇ.13 ರಂದು ಫಲಿತಾಂಶ ಘೋಷಣೆಯಾಗಲಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ. ಇತ್ತ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಆಯೋಗ, 4 ರಾಜ್ಯಗಳ ಉಪ ಚುನಾವಣೆ ದಿನಾಂಕವನ್ನು ಘೋಷಿಸಲಾಗಿದೆ. ಉತ್ತರ ಪ್ರದೇಶ, ಒಡಿಶಾ, ಪಂಜಾಬ್ ಹಾಗೂ ಮೆಘಾಲಯದ ಉಪ ಚುನಾವಣೆ ದಿನಾಂಕವೂ ಘೋಷಣೆಯಾಗಿದೆ. ಈ ಉಪ ಚುನಾವಣೆ ಕೂಡ ಮೇ. 10 ರಂದು ನಡೆಯಲಿದೆ. ಮೇ.13ಕ್ಕೆ ಫಲಿತಾಂಶ ಹೊರಬೀಳಲಿದೆ.ಉಪ ಚುನಾವಣಾ ವಿವರವನ್ನು ಸುದ್ದಿಗೋಷ್ಠಿಯಲ್ಲಿ ರಾಜೀವ್ ಕುಮಾರ್ ನೀಡಿದ್ದಾರೆ. ಎಪ್ರಿಲ್ 20ಕ್ಕೆ ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್ 24 ನಾಪ ಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.