ಪ್ರಧಾನಿ ಮೋದಿ ಜವಳಿ ಕ್ಷೇತ್ರದಲ್ಲಿ ಅಪಾರ ಹೂಡಿಕೆಯನ್ನು ಆಕರ್ಷಿಸಿ, ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಕರ್ನಾಟಕ ಸೇರಿ ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶ ಏಳು ರಾಜ್ಯಗಳಲ್ಲಿ ‘ಪಿಎಂ ಮಿತ್ರ ಮೆಗಾ ಟೆಕ್ಸ್‌ಟೈಲ್‌ಪಾರ್ಕ್’ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ‘ಮೇಕ್‌ಇನ್‌ಇಂಡಿಯಾ’, ‘ಮೇಕ್‌ಫಾರ್‌ದ ವಲ್ಡ್‌ರ್’ಗೆ ಇವು ಮಹಾನ್‌ಉದಾಹರಣೆಯಾಗಲಿವೆ ಎಂದು ಮೋದಿ ಟ್ವೀಟ್‌ಮಾಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಮಾಡಲಾಗಿರುವ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.