ಕಳಸಾ ಬಂಡೂರಿ ಯೋಜನೆಗೆ ಜಲ ಆಯೋಗ ಅನುಮತಿ: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಕೌಂಟರ್ ಕೊಟ್ಟಿದೆ: ಪ್ರಹ್ಲಾದ್ ಜೋಶಿ ಮಾಹಿತಿ

ಜನವರಿ 2 ರಂದು ಮಹದಾಯಿ ವಿಚಾರವಾಗಿ ಕಾಂಗ್ರೆಸ್ ಬೃಹತ್ ಸಮಾವೇಶ ಮಾಡಲಿದೆ. ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ನೀಡಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಕೌಂಟರ್ ಕೊಟ್ಟಿದೆ. ವೀಡಿಯೋ ಮೂಲಕ ಮಾಹಿತಿ ಹಂಚಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದೆವು. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬೊಮ್ಮಾಯಿ ಸರ್ಕಾರವೂ ಅತ್ಯಂತ ಪರಿಶ್ರಮ ವಹಿಸಿದೆ, ನಾನು ಬೊಮ್ಮಾಯಿ ಹಾಗೂ ಗೋವಿಂದ್ ಕಾರಜೋಳ ಅವರಿಗೆ ಅನಂತ ಧನ್ಯವಾದಗಳು ತಿಳಿಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *