ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಟಾರ್ಗೆಟ್‌ಹಾಕಿಕೊಂಡಿರುವ ಕಾಂಗ್ರೆಸ್‌ಆಪರೇಷನ್‌ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ.ಈಗಾಗಲೇ ಬಿಜೆಪಿಯಲ್ಲಿ ಎಸ್‌ಟಿ ಸೋಮಶೇಖರ್‌ಪಕ್ಷ ತ್ಯಜಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಮೊನ್ನೆಯಷ್ಟೇ ಕ್ಷೇತ್ರದ ಅಭಿವೃದ್ದಿ ವಿಚಾರವಾಗಿ ಡಿ ಕೆ ಶಿವಕುಮಾರ್‌ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿರುವ ಎಸ್‌ಟಿ ಸೋಮಶೇಖರ್‌ಕ್ಷೇತ್ರದ ಅನುದಾನ ವಿಚಾರವಾಗಿ ಚರ್ಚಿಸಿದ್ದಾರೆ. ಈ ವೇಳೆ ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಕಾಂಗ್ರೆಸ್‌ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ಭೇಟಿಯಾಗಿ ಚರ್ಚೆ ನಡೆಸಿದರು.ಇನ್ನೂ ಕಾಂಗ್ರೆಸ್‌ನ ಆಪರೇಷನ್ ಹಸ್ತ ಬೆನ್ನಲ್ಲೇ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಸರ್ಕಾರ ಬಂಪರ್ ಆಫರ್ ಕೊಟ್ಟಿದೆ. ಎಸ್.ಟಿ.ಸೋಮಶೇಖರ್ ಶಾಸಕರಾಗಿರುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 7.63 ಕೋಟಿ ರೂ. ಅನುದಾನ ನೀಡಲಾಗಿದೆ. ಇನ್ನೂ ಯಶವಂತಪುರ ವಿಧಾನಸಭಾ ಕ್ಷೇತ್ರ ಕುಡಿಯುವ ನೀರಿಗೆ 7.63 ಕೋಟಿ ರೂ. ಬಿಬಿಎಂಪಿಯಿಂದ ಅನುದಾನ ಮಂಜೂರಿನ ಆದೇಶ ಬಂದಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಕುಡಿಯುವ ನೀರಿಗಾಗಿ ಅನುದಾನ ನೀಡಲಾಗಿದೆ. 1.63 ಕೋಟಿ ರೂ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ ಮೀಸಲಿಡಲಾಗಿದೆ. ಹೊಸದಾಗಿ ಬೋರ್ವೆಲ್ ಕೊರೆಸಲು 4 ಕೋಟಿ ರೂ. ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ತಿಳಿದುಬಂದಿದೆ.