ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್‌ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ. ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದಾರೆ ವರಿಷ್ಠರು. ನಾನು ಮೊದಲಿಂದಲೂ ಒಂದೇ ಮಾತು ಹೇಳ್ತಾ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತೆ. ಎಲ್ಲ ಕ್ಷೇತ್ರ, ಬೂತ್‌ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ನಮಗೆ ವಿಶ್ವಾಸ ಇದೆ. ಮ್ಯಾಜಿಕ್ ನಂಬರ್ ಮುಟ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿ ಸಂದರ್ಭ ಬರಲ್ಲ. ನಮ್ಮ ಮುಂದೆ ಆ ಪ್ರಶ್ನೆ ಇಲ್ಲ. ನಾವು ಬಹುಮತ ದಾಟ್ತೀವಿ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ, ಮಾಡಲಿ. ಎಲ್ಲ ಪಕ್ಷಗಳೂ ಸಭೆ ಮಾಡ್ತಾರೆ ಎಂದರು.