ಕಾಂಗ್ರೆಸ್ನಿಂದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಘೋಷವಾಕ್ಯ, ಲೋಗೋ ಅನಾವರಣ

ಕಾಂಗ್ರೆಸ್ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾವು ಜನವರಿ 14 ರಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದೇವೆ. ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ “ನ್ಯಾಯ್ ಕಾ ಹಕ್ ಮಿಲ್ನೆ ತಕ್” (ನಮಗೆ ನ್ಯಾಯ ಸಿಗುವವರೆಗೆ) ಎಂಬುದು ಯಾತ್ರೆಯ ಘೋಷವಾಕ್ಯವಾಗಿದೆ. ದೇಶದ ಜನರಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ನ್ಯಾಯವನ್ನು ಒದಗಿಸುವ ನಮ್ಮ ಬಲವಾದ ಹೆಜ್ಜೆಯಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ನಡೆದ ಅನಾವರಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಉಪಸ್ಥಿತರಿದ್ದರು.ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಜನಾಂಗೀಯ ಹಿಂಸಾಚಾರ ಕಂಡ ಮಣಿಪುರಕ್ಕೆ ಅವರು ಭೇಟಿ ನೀಡಿಲ್ಲ. ಬೇರೆ ದಾರಿಯಿಲ್ಲ ಎಂದು ಜನರ ಮಧ್ಯೆ ಹೋಗುತ್ತಿದ್ದೇವೆ.

Leave a Reply

Your email address will not be published. Required fields are marked *