ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೀದರ್‌ಹಾಗೂ ಕಲಬುರಗಿ ಜಿಲ್ಲೆಯ ಹಲವೆಡೆ ಬಿಜೆಪಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್‌ನೀಡುವುದು ಕ್ರೆಡಿಟ್ ಕಾರ್ಡ್‌ಅಥವಾ ಡೆಬಿಟ್‌ಕಾರ್ಡ್‌ಅಲ್ಲ, ಅದರಲ್ಲಿ ಹಣವೂ ಇಲ್ಲ, ಅದು ಯಾವ ಪ್ರಯೋಜನಕ್ಕೂ ಬಾರದು ಜನರನ್ನು ಯಾಮಾರಿಸುವ ಕೆಲಸವನ್ನು ಕಾಂಗ್ರೆಸ್‌ಮಾಡುತ್ತಿದೆ. ಕಾಂಗ್ರೆಸ್‌ನವರದ್ದು ಗ್ಯಾರಂಟಿ ಕಾರ್ಡ್‌ಅಲ್ಲ, ಅದೊಂದು ವಿಸಿಟಿಂಗ್‌ಕಾರ್ಡ್‌ಎಂದು ವ್ಯಂಗ್ಯವಾಡಿದರು. ಬಿಜೆಪಿ ಸರ್ಕಾರದಲ್ಲಿ ರಸ್ತೆ, ನೀರಾವರಿ, ಆಸ್ಪತ್ರೆ, ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿದ್ದೇವೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಈ ಭಾಗದ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಟ್ಟಿದ್ದೇವೆ. ಆದರೆ, ಕಾಂಗ್ರೆಸ್, ಕಲ್ಯಾಣ ಕರ್ನಾಟಕಕ್ಕೆ ದ್ರೋಹ ಬಗೆದಿದೆ. ಕಾಂಗ್ರೆಸ್‌ನವರು ಮೀಸಲಾತಿ ಕುರಿತು ತಮ್ಮ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಒಳ ಮೀಸಲಾತಿ ಹೆಚ್ಚಳ ಕುರಿತು ಮೌನ ವಹಿಸಿದ್ದು ಏಕೆ ಎಂದು ಪ್ರಶ್ನಿಸಿದರು.ಬಿಜೆಪಿ ಜಾರಿಗೆ ತಂದಿರುವ ಶೋಷಿತ ಸಮುದಾಯಗಳ ಒಳ ಮೀಸಲಾತಿಯನ್ನು ಕಾಂಗ್ರೆಸ್‌ವಿರೋಧಿಸುತ್ತಿದೆ. ತಾವು ಅಧಿಕಾರಕ್ಕೆ ಬಂದರೆ, ಮೀಸಲಾತಿಯನ್ನು ರದ್ದು ಮಾಡುತ್ತೇವೆಂದು ಹೇಳುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್‌ಗೆ ನೀವು ಹಾಕುವ ಒಂದೊಂದು ಮತವೂ ಮೀಸಲಾತಿ ರದ್ದತಿಗೆ ಸಹಕರಿಸಿದಂತಾಗುತ್ತದೆ. ಅದಕ್ಕೇ ಕಾಂಗ್ರೆಸ್‌ನ್ನು ತಿರಸ್ಕರಿಸಿ, ಬಿಜೆಪಿಯನ್ನು ಪುರಸ್ಕರಿಸಿ ಎಂದು ಜನರಿಗೆ ಕರೆ ನೀಡಿದರು. ಒಂದು ವೇಳೆ ಮೀಸಲಾತಿ ಪ್ರಕ್ರಿಯೆ ರದ್ದುಪಡಿಸಿದರೆ ಕರ್ನಾಟಕದಲ್ಲಿ ಸಾಮಾಜಿಕ ಕ್ರಾಂತಿ ಆಗುತ್ತದೆ ಎಂದು ಎಚ್ಚರಿಸಿದರು.