ಕಾಂಗ್ರೆಸ್‌ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯ ಉಸಿರಾಟದ ಸಮಸ್ಯೆಯಿಂದ ದೆಹಲಿಯ ಆಸ್ಪತ್ರೆಗೆ ದಾಖಲು

ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅನಾರೋಗ್ಯವುಂಟಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿನ್ನೆಯಿಂದ ಅಂದರೆ ಜನವರಿ 3, 2023 ರಿಂದ ಸೋನಿಯಾ ಗಾಂಧಿ ಅನಾರೋಗ್ಯಕ್ಕೀಡಾಗಿದ್ದು, ಈ ಹಿನ್ನೆಲೆ ಇಂದು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋನಿಯಾ ಗಾಂಧಿ ಜತೆಗೆ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ತಾಯಿಯ ಜತೆಗೆ ಆಸ್ಪತ್ರೆಗೆ ತೆರಳಿದ್ದಾರೆ. ದೆಹಲಿಯ ಗಂಗಾರಾಮ್‌ಆಸ್ಪತ್ರೆಗೆ ಸೋನಿಯಾ ಗಾಂಧಿ ದಾಖಲಾಗಿದ್ದಾರೆ. ಕಳೆದ ವರ್ಷ ಕೋವಿಡ್ – 19 ಸೋಂಕಿಗೊಳಗಾಧ ಬಳಿಕ ಅನಾರೋಗ್ಯಕ್ಕೊಳಗಾಗುತ್ತಲೇ ಇದ್ದಾರೆ. ಕೆಲ ತಿಂಗಳ ಹಿಂದಷ್ಟೇ ತಪಾಸಣೆಗೆಂದು ಅವರು ವಿದೇಶಕ್ಕೆ ತೆರಳಿದ್ದರು. ಆದರೂ, ಕರ್ನಾಟಕದ ಮಂಡ್ಯದಲ್ಲಿ ನಡೆದ ಭಾರತ್‌ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಪುತ್ರ ರಾಹುಲ್‌ಜತೆಗೆ ಕಾಣಿಸಿಕೊಂಡಿದ್ದರು.ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಹ ಟ್ವೀಟ್‌ಮಾಡಿದ್ದಾರೆ.76 ವರ್ಷದ ಕಾಂಗ್ರೆಸ್‌ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದ್ದು, ನನಗೆ ಬೇಸರವಾಗಿದೆ. ಶೀಘ್ರದಲ್ಲೇ ಅವರು ಚೇತರಿಸಿಕೊಳ್ಳಲಿ ಹಾಗೂ ಆರೋಗ್ಯವಾಗಿ ಆಸ್ಪತ್ರೆಯಿಂದ ಮರಳಲಿ ಎಂದು ಸಿದ್ದರಾಮಯ್ಯ ತಮ್ಮ ಅಧಿಕೃತ ಟ್ವಿಟ್ಟರ್‌ಖಾತೆಯಲ್ಲಿ ಟ್ವೀಟ್‌ಮಾಡಿದ್ದಾರೆ.

Leave a Reply

Your email address will not be published. Required fields are marked *