ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ರಂಗ ಮಂದಿರದ ಮೈದಾನದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು ನನ್ನ ಶಿಕಾರಿಪುರದಲ್ಲಿ ಕೂಡ ಇಷ್ಟು ದೊಡ್ಡ ಕೆಲಸ ಮಾಡಿಲ್ಲ. ಯಾವ ಶಾಸಕರು ಕೂಡ ಇಷ್ಟು ಅನುದಾನ ತಂದು ಅಭಿವೃದ್ಧಿ ಮಾಡಿಲ್ಲ. ಇವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 145ಕ್ಕೂ ಹೆಚ್ಚು ಸೀಟ್ ಗೆದ್ದು ಅಧಿಕಾರ ಹಿಡಿಯುವುದು ಖಚಿತ. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ನಾವು ಅಧಿಕಾರಕ್ಕೆ ಬರುವುದು. ಆದರೆ ಈ ಕಾಂಗ್ರೆಸ್ ನವರು ತಿರುಕನ ಕನಸನ್ನು ಕಾಣುತ್ತಿದ್ದಾರೆ. ಕೇವಲ ತಿರುಕನ ಕನಸಾಗಿ ಉಳಿಯುತ್ತದೆ ಅವರು ಯಾವಾಗಲೂ ಅಧಿಕಾರಕ್ಕೆ ಬರೋದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.