ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು, ಕಾಂಗ್ರೆಸ್‌ನವರು ಮನೆ ಒಡತಿಗೆ 2 ಸಾವಿರ ಕೊಡುತ್ತೇವೆ ಎಂದು ಹೇಳಿದ್ದಾರೆ. ಅತ್ತೆ-ಸೊಸೆ ಇರೋ ಮನೆ ಕಥೆ ಏನು? ಸೊಸೆಗೆ 2 ಸಾವಿರ ಕೊಟ್ಟರೆ ಅತ್ತೆಗೆ ಏನು ಕೊಡುತ್ತೀರಾ? ಅವರು ಹೊಡೆದಾಡಬೇಕಾ. ಕಾಂಗ್ರೆಸ್ ಮತ್ತು ಬಿಜೆಪಿಯವರು ಅತಂತ್ರ ಎಂದು ಹೇಳುತ್ತಿದ್ದಾರೆ. ಮುಂಡೇವು ಚೆನ್ನಾಗಿ ಕಾಣಲಿ ಅಂತ ಮೇಕಪ್ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ಗೂ ಪೂರ್ಣ ಬಹುಮತ ಬರೋದು ಇಷ್ಟ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ. ಜೆಡಿಎಸ್ ಜನರ ಮನಸ್ಸಿನಲ್ಲಿದೆ. ಈ ಬಾರಿ ಅತಂತ್ರ ಸರ್ಕಾರ ಬರುವುದಿಲ್ಲ. ಜೆಡಿಎಸ್ ಸ್ವತಂತ್ರವಾಗಿ ಸರ್ಕಾರ ಮಾಡುತ್ತದೆ ಎಂದು ಭವಿಷ್ಯ ನುಡಿದರು.