ವಿಧಾನಸಭಾ ಚುನಾವಣೆ ನಡೆದ ಹಿಮಾಚಲ ಪ್ರದೇಶದಲ್ಲಿ ರಾಹುಲ್ ಗಾಂಧಿ ಪ್ರಚಾರದಲ್ಲಿ ತೊಡಗಿಸಿಕೊಳ್ಳದ ಕಾರಣ ಬಿಜೆಪಿ ಭಾರೀ ಟೀಕೆ ಮಾಡುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ವಿರಾಮದ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಲಿದ್ದು, ನವೆಂಬರ್ 22 ರಂದು ಗುಜರಾತ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ. ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್ ಗುಜರಾತ್ ಚುನಾವಣೆಗೆ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ರಾಜ್ಯದ 142 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.