ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ ನಡೆದು ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದೆ. ಲೋಕಸಭಾ ಚುನಾವಣೆ ಸಮೀಪಿಸಿರುವ ಹೊತ್ತಲ್ಲಿ ಇಷ್ಟೊಂದು ಹಣ ಪತ್ತೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧ ಪಕ್ಷಗಳು ಮುಗಿಬಿದ್ದಿವೆ.ಐಟಿ ದಾಳಿ ವಿಚಾರ ಸಂಬಂಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಕರ್ನಾಟಕಕ್ಕೆಕಾಂಗ್ರೆಸ್ಕನ್ನ ಎಂಬ ಹ್ಯಾಷ್ ಟ್ಯಾಗ್ ಬಳಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ. ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಆಗ್ರಹಿಸಿದ್ದಾರೆ.