ಕಾಂಗ್ರೆಸ್ ಸಂಸ್ಕೃತಿ ಯೂಸ್ ಆ್ಯಂಡ್ ಥ್ರೋ: ಚುನಾವಣೆ ಮುಗಿಯುವವರೆಗೆ ಸನ್ಮಾನ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅವಮಾನ ಬಿಜೆಪಿ ತೊರೆದ ನಾಯಕರಿಗೆ ಸಿಎಂ ಟಾಂಗ್

ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರು ಒಂದು ಕಾರಣ ಕೊಡಬೇಕು. ಬಿಜೆಪಿ ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನಮಾನಗಳನ್ನು ಕೊಡುವುದರ ಜೊತೆಗೆ ಅವರನ್ನು ಅತ್ಯಂತ ಗೌರವಯುತವಾಗಿ ಕಂಡಿದೆ. ಇದರಲ್ಲಿ ಎರಡನೇ ಮಾತಿಲ್ಲ. ಕಳೆದ 25 ವರ್ಷದ ಅವರ ಬೆಳವಣಿಗೆಯಲ್ಲಿ ಬಿಜೆಪಿಯೇ ಪ್ರಮುಖವಾದ ಪಾತ್ರವನ್ನು ವಹಿಸಿದೆ. 25 ವರ್ಷ ಅವರನ್ನು ಬೆಳೆಸಿದ ಬಿಜೆಪಿ ಈಗ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಮಾಡಿಲ್ಲ. ಪಕ್ಷದ ವರಿಷ್ಠರಿಗೂ ಕೂಡಾ ಇದರ ಬಗ್ಗೆ ಮಾಹಿತಿಯಿದೆ. ಪ್ರಮುಖ ನಾಯಕರಲ್ಲಿ ಶೆಟ್ಟರ್ ಕೂಡಾ ಒಬ್ಬರಾಗಿದ್ದರು. ಹೀಗಾಗಿ ಇದರಲ್ಲಿ ಷಡ್ಯಂತ್ರವಿದೆ ಅಥವಾ ಕೇಂದ್ರೀಕೃತವಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ. ಹೋಗುವಾಗ ಒಂದು ನೆಪ ಹೇಳಿದ್ದಾರೆ ಅಷ್ಟೇ ಕಾಂಗ್ರೆಸ್‌ನ ಸಂಸ್ಕೃತಿ ಯೂಸ್ ಆ್ಯಂಡ್ ಥ್ರೋ. ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ ಹೋದವರಿಗೆ ಸನ್ಮಾನ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅವಮಾನ ಮಾಡುವುದು ಕಾಂಗ್ರೆಸ್‌ನ ಸಂಸ್ಕೃತಿ ಎಂದು ಸ್ಪಷ್ಟನೆ ನೀಡಿದರು.

Leave a Reply

Your email address will not be published. Required fields are marked *