ಕಾಂಗ್ರೆಸ್‌ ಸರ್ಕಾರದಿಂದ ಮಹಿಳೆಯರ ಸುರಕ್ಷತೆಗೆ ಆದ್ಯತೆ: ಸಚಿವ ಪರಮೇಶ್ವರ್‌

ಬೆಂಗಳೂರು ನಗರ ಪೊಲೀಸ್‌ ಹಾಗೂ ಪರಿಹಾರ ಸಂಸ್ಥೆಯ ಸಹಯೋಗದಲ್ಲಿ ಬುಧವಾರ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಈ ಹಿಂದೆ ಪೊಲೀಸ್ ಸಹಾಯವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು ನಗರದಲ್ಲಿ 7,500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.  ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ.ಬೆಂಗಳೂರಿನಲ್ಲಿ ಹೊಸದಾಗಿ ಆರು ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ.8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬುದು ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *