ಮಾಜಿ ಸಚಿವ, ಹಿರಿಯ ಕಾಂಗ್ರೆಸ ಮುಖಂಡ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಿಂದ ಜಾರಿ ನಿರ್ದೇಶನಾಲಯಗೆ ನೋಟಿಸ್ ಜಾರಿ ಮಾಡಲಾಗಿದೆ. ಅಕ್ಟೋಬರ್ 7ರಂದು ದೆಹಲಿಯಲ್ಲಿ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಡಿಕೆ ಶಿವಕುಮಾರ್ ಮಾಡಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದರು. ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಾರ್ಯಾಚರಣೆಗಳ ಬಗ್ಗೆ ನಡೆಯುತ್ತಿರುವ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಡಿಕೆ ಶಿವಕುಮಾರ್ ಮಾತ್ರವಲ್ಲದೆ ಅವರ ಸಹೋದರ ಹಾಗೂ ಸಂಸದ ಡಿಕೆ ಸುರೇಶ್ ಅವರಿಗೂ ಇಡಿ ಸಮನ್ಸ್ ನೀಡಿತ್ತು.