ಕಾಮಗಾರಿ ನಡೆಸದೆ ₹118 ಕೋಟಿ ರೂಪಾಯಿ ಮೌಲ್ಯದ ಬಿಲ್‌ತೆರವು- ಬಿಬಿಎಂಪಿ, ಕೆಆರ್‌ಐಡಿಎಲ್‌ನ 8 ಎಂಜಿನಿಯರ್‌ಗಳ ಅಮಾನತು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ (ಕೆಆರ್‌ಐಡಿಎಲ್)ಗೆ ಸಂಬಂಧಿಸಿದ ಎಂಟು ಎಂಜಿನಿಯರ್‌ಗಳನ್ನು ನಗರಾಭಿವೃದ್ಧಿ ಇಲಾಖೆ ಅಮಾನತುಗಳಿಸಿದೆ. ಲೋಕಾಯುಕ್ತ ವರದಿಯ ಶಿಫಾರಸುಗಳ ಆಧಾರದ ಮೇಲೆ ಈ ಕ್ರಮವನ್ನು ಜರುಗಿಸಲಾಗಿದೆ.ಅಮಾನತುಗೊಂಡ ಅಧಿಕಾರಿಗಳು 118 ಕೋಟಿ ರೂಪಾಯಿ ಮೌಲ್ಯದ ಬಿಲ್‌ಗಳನ್ನು ತೆರವುಗೊಳಿಸಿದ್ದಾರೆ. 2019-20 ರಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಅಥವಾ ಯಾವುದೇ ಕಾರ್ಯಗಳನ್ನು ಕೈಗೊಳ್ಳದೇ ಬಿಲ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.ಬಿಬಿಎಂಪಿಯು ಹಲವು ಯೋಜನೆಗಳಲ್ಲಿ ಕಾಮಗಾರಿ ನಡೆಸದೆ ಗುತ್ತಿಗೆದಾರರಿಗೆ 250 ಕೋಟಿ ರೂ.ಗಳನ್ನು ನೀಡಿದೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಕಾಮಗಾರಿ ನೀಡಿದ ಎರಡು ತಿಂಗಳಲ್ಲಿ ಬಿಲ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಒಟ್ಟು 126 ಕಾಮಗಾರಿಗಳಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದರು.ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರ ಆದೇಶದ ಮೇರೆಗೆ ಲೋಕಾಯುಕ್ತ ತಾಂತ್ರಿಕ ವಿಭಾಗದ ಐವರು ಎಂಜಿನಿಯರ್‌ಗಳು ತನಿಖೆ ನಡೆಸಿ 116 ಕಾಮಗಾರಿಗಳಲ್ಲಿ ಲೋಪದೋಷ ಕಂಡು ಬಂದಿದೆ ಎಂದು ವರದಿ ನೀಡಲಾಗಿದೆ. 114 ಯೋಜನೆಗಳಿಗೆ ಕಾಮಗಾರಿ ಮಾಡದೇ ಬಿಲ್ ಕ್ಲಿಯರ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಎರಡು ಯೋಜನೆಗಳಲ್ಲಿ, ಕಾಮಗಾರಿಗಳು ಟೆಂಡರ್-ನಿರ್ದಿಷ್ಟವಾಗಿಲ್ಲ. ಸುಮಾರು 118 ಕೋಟಿ ಸಾರ್ವಜನಿಕ ಹಣವನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು 2022 ರ ಜನವರಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಬಹುತೇಕ ಯೋಜನೆಗಳು ಪ್ರಾರಂಭವಾಗದಿದ್ದರೂ ಅಧಿಕಾರಿಗಳು ಒಟ್ಟು ಕಾಮಗಾರಿಗಳ 70 ಪ್ರತಿಶತದಷ್ಟು ಬಿಲ್‌ಗಳನ್ನು ತೆರವುಗೊಳಿಸಿದ್ದಾರೆ. ಅಲ್ಲದೆ ಈ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಕೆಆರ್‌ಐಡಿಎಲ್‌ನಿಂದ ನಡೆದಿರುವ ಕಾಮಗಾರಿಗಳು ಮತ್ತು ನಡೆಯುತ್ತಿರುವ ಕಾಮಗಾರಿಗಳ ತನಿಖೆಗೆ ಲೋಕಾಯುಕ್ತ ಶಿಫಾರಸು ಮಾಡಿದೆ.

Leave a Reply

Your email address will not be published. Required fields are marked *