ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ 2022 ಅನ್ನು ಉದ್ಘಾಟಿಸಿದ್ದಾರೆ. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಎರಡು ದಿನಗಳ ಈ ಕಾರ್ಯಕ್ರಮ ದೇಶಾದ್ಯಂತ 13,500 ಕ್ಕೂ ಹೆಚ್ಚು ರೈತರು ಮತ್ತು ಸುಮಾರು 1,500 ಅಗ್ರಿ ಸ್ಟಾರ್ಟ್‌ಅಪ್‌ಗಳನ್ನು ಒಟ್ಟುಗೂಡಿಸುತ್ತದೆ ಎನ್ನಲಾಗಿದೆ.
ಸಮ್ಮೆಳನದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ನೇ ಕಂತಿನ ಮೂಲಕ 16 ಸಾವಿರ ಕೋಟಿ ರೂ.ಗಳ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ.ಇದರಲ್ಲಿ ರಾಜ್ಯದ 50. 36 ಲಕ್ಷ ರೈತರ ಖಾತೆಗೆ 1007.26 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಸಂಪುಟದ ಸದಸ್ಯರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ನೇ ಕಂತಿನ ಹಣವನ್ನು ಫಲಾನುಭವಿ ಕೃಷಿಕರಿಗೆ ವರ್ಗಾಯಿಸಿದ್ದಾರೆ.