ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ; ಅಣೆಕಟ್ಟು ಗೇಟ್‌ತೆರೆದು ನೀರು ಬಿಟ್ಟ 700 ಆಂಧ್ರ ಪೊಲೀಸರು

ಕುಡಿಯುವ ನೀರಿಗಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ಉದ್ವಿಗ್ನತೆ ಉಂಟಾಗಿದೆ. ಆಂಧ್ರಪ್ರದೇಶವು ನಾಗಾರ್ಜುನ ಸಾಗರ ಅಣೆಕಟ್ಟಿನ ಉಸ್ತುವಾರಿ ವಹಿಸಿಕೊಂಡು ನೀರು ಬಿಡುಗಡೆ ಮಾಡಿದೆ. ಇದು ಎರಡು ರಾಜ್ಯಗಳ ಸಂಘರ್ಷಕ್ಕೆ ಕಾರಣವಾಗಿದೆ. ಗುರುವಾರ ಬೆಳಗಿನ ಜಾವ ತೆಲಂಗಾಣದ ಬಹುತೇಕ ಅಧಿಕಾರಿಗಳು ಮತದಾನದಲ್ಲಿ ನಿರತರಾಗಿದ್ದಾಗ ಸುಮಾರು 700 ಆಂಧ್ರ ಪೊಲೀಸರು ಬಲ ಕಾಲುವೆ ತೆರೆದು ಗಂಟೆಗೆ 500 ಕ್ಯೂಸೆಕ್ ಕೃಷ್ಣಾ ನೀರನ್ನು ಬಿಡುಗಡೆ ಮಾಡಿದ್ದಾರೆ. ನಾವು ಕುಡಿಯುವ ನೀರಿನ ಉದ್ದೇಶಕ್ಕಾಗಿ ಕೃಷ್ಣಾ ನದಿಯ ನಾಗಾರ್ಜುನಸಾಗರ ಬಲ ಕಾಲುವೆಯಿಂದ ನೀರು ಬಿಡುತ್ತಿದ್ದೇವೆ ಎಂದು ಆಂಧ್ರಪ್ರದೇಶ ರಾಜ್ಯದ ನೀರಾವರಿ ಸಚಿವ ಅಂಬಟಿ ರಾಮಬಾಬು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಸೇರಿದ ನೀರನ್ನು ಮಾತ್ರ ತೆಗೆದುಕೊಂಡಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *