ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ರಾಜ್ಯ ಸರ್ಕಾರವು ಪತ್ರ ಬರೆದಿದೆ. ಈ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ವರು ಕೇಂದ್ರದ ಪರಿಶಿಷ್ಟಪಂಗಡಗಳ ವ್ಯವಹಾರಗಳ ಇಲಾಖೆ ಕಾರ್ಯದಶಿ ಅನಿಲ್ಕುಮಾರ್ಜಾ ಅವರಿಗೆ ಪತ್ರ ಬರೆದಿದ್ದಾರೆ.ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕು ಎಂದು ದಶಕಕ್ಕೂ ಹೆಚ್ಚು ಕಾಲದಿಂದ ಹೋರಾಟ ನಡೆಯುತ್ತಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಹಾಗೂ ಈಶ್ವರಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಸಾವಿರಾರು ಮಂದಿ ಪಾದಯಾತ್ರೆ ನಡೆಸಿದ್ದರು.