ಕುಸ್ತಿಪಟುಗಳ ಸಂಘದ ಮುಖ್ಯಸ್ಥ ಬ್ರಿಜ್‌ಭೂಷಣ್‌ಸಿಂಗ್‌ವಿರುದ್ಧ ನಡೆಯುತ್ತಿದ್ದ ಕುಸ್ತಿಪಟುಗಳ ಪ್ರತಿಭಟನೆ ಅಂತ್ಯವಾಗಿದೆ. ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್, ವಿನೇಶ್‌ಫೋಗಟ್‌ಹಾಗೂ ಭಜರಂಗ್‌ಪುನಿಯಾ ಸಹ ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ. ಪ್ರತಿಭಟನಾ ಕಾವು ಹೆಚ್ಚಾಗುತ್ತಿದ್ದ ಬೆನ್ನಲ್ಲೇ ಈ ಆಶ್ಚರ್ಯಕರ ಬೆಳವಣಿಗೆ ನಡೆದಿದೆ. ಖ್ಯಾತ ಕುಸ್ತಿಪಟು ಸಾಕ್ಷಿ ಮಲಿಕ್‌ಪ್ರತಿಭಟನೆ ಕೈಬಿಟ್ಟು ಭಾರತೀಯ ರೈಲ್ವೆಯಲ್ಲಿ ಉದ್ಯೋಗಿ ಅಗಿರುವ ತನ್ನ ಕೆಲಸಕ್ಕೆ ಹಾಜರಾಗಿದ್ದಾರೆ. ಇದೇ ರೀತಿ, ಇತರೆ ಇಬ್ಬರು ಕುಸ್ತಿಪಟುಗಳು ಸಹ ತಮ್ಮ ಸರ್ಕಾರಿ ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಹಲವು ತಿಂಗಳುಗಳಿಂದ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಅಂತ್ಯವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ಶಾ ಭೇಟಿಯಾದ 2 ದಿನಗಳ ಬಳಿಕ ಈ ಬೆಳವಣಿಗೆ ನಡೆದಿದೆ. ಏಪ್ರಿಲ್‌ನಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಶನಿವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಮನವಿ ಮಾಡಿದರು.ನಂತರ, ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದರು. “ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ” ಎಂದೂ ಅವರು ಕುಸ್ತಿಪಟುಗಳಿಗೆ ಹೇಳಿದರು. ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಐದು ದಿನಗಳ ಗಡುವು ಶನಿವಾರ ಕೊನೆಗೊಂಡ ನಂತರ ಪ್ರತಿಭಟನಾ ನಿರತ ಕುಸ್ತಿಪಟುಗಳು ಅಮಿತ್‌ಶಾ ಅವರನ್ನು ಭೇಟಿಯಾಗಲು ಕೋರಿದ್ದರು.