ಕೆಜೆ ಹಳ್ಳಿ, ಡಿಜಿ ಹಳ್ಳಿ ಪ್ರಕರಣದಲ್ಲೂ ಅಫ್ಸರ್ ಪಾಷಾ ಪಾತ್ರ – ಕರ್ನಾಟಕದಲ್ಲಿ ನಾವು ಯಾರು ಸುರಕ್ಷಿತವಾಗಿಲ್ಲ ಶೋಭಾ ಕರಂದ್ಲಾಜೆ ಆರೋಪ

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್ ಮೈಂಡ್ ಅಫ್ಸರ್ ಪಾಷಾ ಕೆಜೆ ಹಳ್ಳಿ ಹಾಗೂ ಡಿಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ ಮಂಗಳೂರು ಸ್ಫೋಟದ ಬಗ್ಗೆ ಕಾಂಗ್ರೆಸ್ ನಾಯಕರು ಭಯೋತ್ಪಾದನಾ ಕೃತ್ಯವಲ್ಲ ಎಂದು ವಾದಿಸಿದ್ದರು. ಆದರೆ ಈಗ ಸತ್ಯಗಳು ಹೊರಗೆ ಬರುತ್ತಿವೆ. ಆದರೆ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ. ಬೆಳಗಾವಿಯ ಜೈಲಿನಲ್ಲಿದ್ದ ಅಫ್ಸರ್ ಪಾಷಾ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತಿಳಿದು ಬಂದಿದೆ. ಅಲ್ಲದೇ ಮಹಾರಾಷ್ಟ್ರ ಎಟಿಎಸ್ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದೆ. ಇವರಿಂದಲೇ ಕೇಂದ್ರ ಸಚಿವರಿಗೆ ಬೆದರಿಕೆ ಸಹ ಬಂದಿತ್ತು. ಈ ಪ್ರಕರಣದ ಆರೋಪಿ ಜಯೇಶ್ ಪೂಜಾರಿ ಶಾಹೀರ್ ಆಗಿ ಮತಾಂತರವಾಗಿದ್ದಾನೆ. ಕರ್ನಾಟಕದಲ್ಲಿ ನಾವು ಯಾರು ಸುರಕ್ಷಿತವಾಗಿಲ್ಲ. ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತಿದ್ದಾರೆ. ಕೆಜೆ ಹಳ್ಳಿ ಹಾಗೂ ಡಿಜಿ ಹಳ್ಳಿ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸುವಂತೆ ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *