ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೋಶಿಮಠದಲ್ಲಿ ಆಗುತ್ತಿರುವ ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಇಸ್ರೋ ಬಿಡುಗಡೆಗೊಳಿಸಿರುವ ಚಿತ್ರಗಳನ್ನು ಕಾರ್ಟೊಸ್ಯಾಟ್-2ಎಸ್ ಉಪಗ್ರಹದಿಂದ ತೆಗೆಯಲಾಗಿದೆ. ಎನ್‍ಆರ್‌ಎಸ್‌ಸಿ ಮುಳುಗುತ್ತಿರುವ ಪ್ರದೇಶಗಳ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಸೇನೆಯ ಹೆಲಿಪ್ಯಾಡ್ ಮತ್ತು ನರಸಿಂಹ ದೇವಸ್ಥಾನ ಸೇರಿದಂತೆ ಇಡೀ ಪಟ್ಟಣವನ್ನು ಸೂಕ್ಷ್ಮ ವಲಯ ಎಂದು ಗುರುತಿಸಲಾಗಿದೆ. ಜೋಶಿಮಠದಲ್ಲಿನ ರಸ್ತೆ, ಮನೆಗಳು ಸೇರಿದಂತೆ ಅನೇಕ ಕಡೆ ಬಿರುಕುಗಳು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಅಲ್ಲಿ ವಾಸಿಸಲು ಅಪಾಯಕಾರಿ ಎಂದು ಗುರುತಿಸಲಾಗಿರುವ 600ಕ್ಕೂ ಹೆಚ್ಚು ಕಟ್ಟಡಗಳನ್ನು ನೆಲಸಮಗೊಳಿಸಿ ಜೋಶಿಮಠ ಮತ್ತು ಸಮೀಪದ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಸರ್ಕಾರ ಪರಿಹಾರವನ್ನು ಘೋಷಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದೆ. ಕೆಲವೇ ದಿನಗಳಲ್ಲಿ ಇಡೀ ಜೋಶಿಮಠ ಮುಳುಗುವ ಎಚ್ಚರಿಕೆಯನ್ನು ನೀಡಿದೆ.