ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಇಂದು ಸಂಜೆ 4.30ಕ್ಕೆ ಮಹತ್ವದ ಸಭೆ ಕರೆದಿದ್ದಾರೆ.