ಗುಜರಾತ್ ಮೂಲದ ಅಮುಲ್ ಮತ್ತು ರಾಜ್ಯದ ನಂದಿನಿ ಹಾಲು ವಿಚಾರವಾಗಿ ರಾಜ್ಯಾದ್ಯಂತ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುವುದಲ್ಲದೆ, ಇದೀಗ ನಂದಿನಿ ಬ್ರಾಂಡ್‌ಬದಲಿಗೆ ಅಮುಲ್ ಹೇರುತ್ತಿರುವ ವಿಚಾರವಾಗಿ ಟ್ವಿಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು, “ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ತಕ್ಷಣ ರಾಜ್ಯದಲ್ಲಿ “ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಅಲ್ಲದೇ ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಕನ್ನಡಗಿರು ಎಚ್ಚೆತ್ತುಕೊಳ್ಳಬೇಕು ಸಿಡಿದೇಳಬೇಕು . ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು. ಎಂದು ಕರೆ ನೀಡಿದ್ದಾರೆ.