ಕೇಜ್ರಿವಾಲ್‌ಗೆ ಹೈಕೋರ್ಟ್ ಶಾಕ್; ತುರ್ತು ವಿಚಾರಣೆ ಅರ್ಜಿ ತಿರಸ್ಕಾರ

ತಮ್ಮ ಬಂಧನ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಏಳು ದಿನಗಳ ಕಾಲ ಕಸ್ಟಡಿಗೆ ನೀಡಿರುವ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ತುರ್ತು ವಿಚಾರಣೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಅರವಿಂದ್ ಕೇಜ್ರಿವಾಲ್‌ರನ್ನು ಮದ್ಯದ ನೀತಿ ಪ್ರಕರಣದಲ್ಲಿ ಗುರುವಾರ ಬಂಧಿಸಲಾಯಿತು ಮತ್ತು ಮರುದಿನ, ರೂಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿತು. ಅವರ ಬಂಧನದ ವಿರುದ್ಧ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದರು. ಭಾನುವಾರದೊಳಗೆ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಹೋಳಿ ಹಬ್ಬಕ್ಕಾಗಿ ಎರಡು ರಜಾದಿನಗಳ ನಂತರದ ಮೊದಲ ಕೆಲಸದ ದಿನವಾದ ಬುಧವಾರ ಅರ್ಜಿಯ ವಿಚಾರಣೆಯನ್ನು ನಡೆಸಲಾಗುವುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಇದನ್ನು ಹೈಕೋರ್ಟ್‌ನ ರಿಜಿಸ್ಟ್ರಿ ದೃಢಪಡಿಸಿದೆ.


Leave a Reply

Your email address will not be published. Required fields are marked *