ಡೆಹ್ರಾಡೂನ್‌ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ವಾಗತಿಸಿದರು. ಉತ್ತರಾಖಂಡದ ಪವಿತ್ರ ದೇಗುಲದಲ್ಲಿ ಹಿಮಾಚಲ ಪ್ರದೇಶದ ಮಹಿಳೆಯರು ಕೈಯಿಂದ ಮಾಡಿದ ಸಾಂಪ್ರದಾಯಿಕ ಪಹಾಡಿ ಉಡುಪನ್ನು ಧರಿಸಿದ ಪ್ರಧಾನಿ ಕೇದಾರನಾಥ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು ಉತ್ತರಾಖಂಡಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ 3400 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಕೇದಾರನಾಥ ರೋಪ್‌ವೇ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬದರಿನಾಥಕ್ಕೆ ತೆರಳಲಿರುವ ಪ್ರಧಾನಿ, ಬದರಿನಾಥ ದೇವಸ್ಥಾನದಲ್ಲಿ ಶ್ರೀಗಳ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ.