ಕೇವಲ ಗಾಜಾ ಮಾತ್ರವಲ್ಲ ವಿಶ್ವದೆಲ್ಲೆಡೆ ಇರುವ ಹಮಾಸ್‌ನಾಯಕರ ಹತ್ಯೆಗೆ ಮುಂದಾದ ಇಸ್ರೇಲ್‌

ಕೇವಲ ಗಾಜಾ ಪಟ್ಟಿಯಲ್ಲಿ ಅಲ್ಲ ವಿಶ್ವದೆಲ್ಲೆಡೆ ಇರುವ ಹಮಾಸ್‌ನಾಯಕರನ್ನು ಹತ್ಯೆ ಮಾಡಲು ಇಸ್ರೇಲ್‌ಈಗ ಮುಂದಾಗಿದೆ. ಇಸ್ರೇಲ್‌ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಸ್ರೇಲಿನ ವಿದೇಶಿ ಗುಪ್ತಚರ ಸೇವೆ ನೀಡುವ ಮೊಸಾದ್‌ಗೆ ವಿಶ್ವದೆಲ್ಲೆಡೆ ಇರುವ ಹಮಾಸ್‌ನಾಯಕರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವಂತೆ ಆದೇಶ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.ಟರ್ಕಿ, ಲೆಬನಾನ್ ಮತ್ತು ಕತಾರ್‌ನಲ್ಲಿ ನೆಲೆಸಿರುವ ಹಮಾಸ್ ನಾಯಕರನ್ನು ಪತ್ತೆ ಹಚ್ಚುವ ಕೆಲಸವನ್ನು ಗುಪ್ತಚರ ಇಲಾಖೆ ಆರಂಭಿಸಿದೆ. ಕತಾರ್‌ತನ್ನ ರಾಜಧಾನಿ ದೋಹಾದಲ್ಲಿ ಕಳೆದ ಒಂದು ದಶಕದಿಂದ ರಾಜಕೀಯ ಕಚೇರಿಯನ್ನು ನಡೆಸಲು ಹಮಾಸ್‌ಗೆ ಅವಕಾಶ ಮಾಡಿಕೊಟ್ಟಿದೆ ಎಂದು ವರದಿ ತಿಳಿಸಿದೆ.

Leave a Reply

Your email address will not be published. Required fields are marked *