ಕೊಡಗಿನಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಕೊಡಗಿನ ವಿರೋಧಿ, ಕೊಡವರ ವಿರೋಧಿ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದಾರೆ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ನೂರಾರು ಕಾರ್ಯಕರ್ತರು ಪ್ರತಿಭಟಿಸಿ ಸಿದ್ದರಾಮಯ್ಯ ಅವರಿದ್ದ ಕಾರನ್ನು ಅಡ್ಡಗಟ್ಟಿ ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದ್ದರು. ಇದೇ ವೇಳೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ದರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದೆ. ಅಷ್ಟೇ ಅಲ್ಲದೇ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿದ್ದಾರೆ. ಹಿಂದೂ ವಿರೋಧಿ ಸಿದ್ದರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *