ಕೊಳವೆ ಬಾವಿ ಹಗರಣದಲ್ಲಿ ಅಕ್ರಮ ನಡೆದಿರೋದು ಸಾಬೀತಾಗಿರುವ ಹಿನ್ನೆಲೆ ಬಿಬಿಎಂಪಿ ಹಣಕಾಸು ವಿಭಾಗಕ್ಕೆ ಇಡಿ ನೋಟಿಸ್ಜಾರಿ ಮಾಡಿದೆ. ಕೊಳವೆಬಾವಿ ಹಾಗೂ ಆರ್ಓ ಪ್ಲಾಂಟ್ ಅಳವಡಿಕೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣದ ಬಗ್ಗೆ ಇಂಚಿಂಚು ಮಾಹಿತಿಯನ್ನು ಪಡೆಯಲು ಇಡಿ ಅಧಿಕಾರಿಗಳು ಮುಂದಾಗಿದ್ದಾರೆ. ಸುಮಾರು 969 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆಕ್ರಮಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿಯ ಹಣಕಾಸು ಇಲಾಖೆಗೆ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗಲು ಫೆಬ್ರವರಿ 7 ರಂದು ಇಡಿ ಕಛೇರಿಗೆ ಹಾಜರಾಗಿ ಇಡಿ ಅಧಿಕಾರಿಗಳು ತಿಳಿಸಿದ್ದು, ನೋಟಿಸ್ನಲ್ಲಿ ಉಲ್ಲೇಖ ಮಾಡಲಾಗಿದೆ.