ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಮೇಲಾಟಗಳು ಜೋರಾಗಿದೆ. ಸಿದ್ದರಾಮಯ್ಯ ಕೋಲಾರದಿಂದಲೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬಳಿಕ ಕೋಲಾರ ಈಗ ಕರ್ನಾಟಕದಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಹೀಗಾಗಿ ಕೋಲಾರ ಆರ್‌ಎಸ್‍ಎಸ್ ಟಾರ್ಗೆಟ್ ಲಿಸ್ಟ್‌ನಲ್ಲಿ ಮೊದಲ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಖುದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ಸಂತೋಷ್ ಅಖಾಡಕ್ಕಿಳಿದ್ದಿದ್ದಾರೆ.ಈ ತಂತ್ರಗಾರಿಕೆ ಯಶಸ್ವಿಯಾದರೆ ಕೋಲಾರದಲ್ಲಿ ಬಿಜೆಪಿಗೆ ಜಯ ಸಿಗಬಹುದು ಎಂಬ ಲೆಕ್ಕಾಚಾರವನ್ನು ಕಮಲ ನಾಯಕರು ಹಾಕಿಕೊಂಡಿದ್ದಾರೆ. ಬೈರತಿ ಬಸವರಾಜು, ಈಶ್ವರಪ್ಪ, ಎಂಟಿಬಿ, ಅಭ್ಯರ್ಥಿ ವರ್ತೂರು ಪ್ರಕಾಶ್ ಮೂಲಕ ಕುರುಬ ಮತ ಸೆಳೆಯಲು ಪ್ಲಾನ್ ಮಾಡಲಾಗಿದೆ.