ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಉಳಿದಿವೆ. ಜೆಡಿಎಸ್‌ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆಡಳಿತ ರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ ಮಾರ್ಚ್22 ರಂದು ಕಾಂಗ್ರೆಸ್‌ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಎರಡು ತಿಂಗಳ ಹಿಂದೆ ಘೋಷಿಸಿದ್ದರು ಆದರೆ, ಈಗ ಕೇಂದ್ರ ನಾಯಕರು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಒಳಿತೆಂದು ಸಿದ್ದರಾಮಯ್ಯನವರಿಗೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದು ಅನುಮಾನವೆಂದು ಹೇಳಲಾಗುತ್ತಿದೆ. ಪುತ್ರ ಯತೀಂದ್ರ ಅವರು ಶಾಸಕರಾಗಿರುವ ವರಣಾ ಕ್ಷೇತ್ರವು ಸಿದ್ದರಾಮಯ್ಯನವರಿಗೆ ಸೇಫ್‌ಕ್ಷೇತ್ರವೆಂಬ ಕಾರಣಕ್ಕೆ ಈ ಸಲಹೆಯನ್ನು ವರಿಷ್ಠರು ನೀಡಿದ್ದಾರೆ.ಇದೆಲ್ಲದರ ನಡುವೆ ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಬೆಂಬಲಿಗರು ಅವರ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಮಯ್ಯನವರಿಗೆ ಆಗ್ರಹಿಸುತ್ತಿದ್ದಾರೆ. ಅವರು ಕೋಲಾರದಿಂದ ಸ್ಪರ್ಧಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಭಿಮಾನಿಯೊಬ್ಬ ಹೇಳಿದ್ದಾನೆ. ಶರ್ಟ್‌ಬಿಚ್ಚಿ ಬಾರಕೋಲಿನಿಂದ ಅಭಿಮಾನಿಯೊಬ್ಬ ಹೊಡೆದುಕೊಂಡಿದ್ದಾನೆ. ಎಂಎಲ್‌ಸಿ ಪುಟ್ಟಣ್ಣ ಅವರು ಕಾಂಗ್ರೆಸ್‌ಸೇರಿದ್ದಾರೆ. ಅವರು ರಾಜಾಜಿನಗರದಿಂದ ಸ್ಪರ್ಧಿಸಬಹುದೆಂಬ ಮಾತುಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಭವ್ಯಾ ನರಸಿಂಹ ಮೂರ್ತಿ ಅವರಿಗೆ ಕಾಂಗ್ರೆಸ್‌ಟಿಕೆಟ್‌ನೀಡಲೇಬೇಕೆಂದು ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.