ಕೋಲಾರದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಂದ ಸಾಲ ಕಟ್ಟಲ್ಲ ಎಂಬ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಕೋಲಾರದಲ್ಲಿ ಸ್ತ್ರೀ ಶಕ್ತಿ ಸಂಘಗಳು ಸಾಲಮನ್ನಾ ಮಾಡಿ ಎಂದು ಗಲಾಟೆ ಮಾಡುತ್ತಿದ್ದಾರೆ. ಅದನ್ನು ಮಾಡಿಸುತ್ತಾ ಇರುವವರೇ ಕಾಂಗ್ರೆಸ್‌ನವರು ಎಂದು ಆರೋಪ ಮಾಡಿದರು. ಕೋಲಾರದ ಡಿಸಿಸಿ ಬ್ಯಾಂಕ್‌ನಲ್ಲಿ ಅಕ್ರಮ ನಡೆದಿದೆ. ಅದೊಂದು ದೊಡ್ಡ ಕರ್ಮಕಾಂಡ. ಇದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ನವರೇ ಮಹಿಳಾ ಸ್ತ್ರೀ ಶಕ್ತಿ ಸಂಘಗಳಿಂದ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಲೂಟಿ ಹೊಡೆದಿದ್ದಾರೆ. ಅದು ತನಿಖೆ ನಡೆದರೆ ಯಾರು ಯಾರು ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ. ಹೀಗಾಗಿ ಸ್ತ್ರೀ ಶಕ್ತಿ ಗುಂಪುಗಳನ್ನು ಮುಂದೆ ಬಿಟ್ಟು ಕಾಂಗ್ರೆಸ್‌ನವರು, ನಿರ್ದೇಶಕರು ಪ್ರತಿಭಟನೆ ಮಾಡಿಸುತ್ತಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಎಂದು ಒತ್ತಾಯ ಮಾಡಿದರು.