ಕೋಲಾರ, ವರುಣಾ ಅಲ್ಲ – ಬಾದಾಮಿಯಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರಾ ಭಾರೀ ಕುತೂಹಲ ಮೂಡಿಸುತ್ತಿದೆ

ಈ ಬಾರಿಯ ವಿಧಾನಸಭಾ ಚುನಾವಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಹಾಗೂ ವರುಣಾ ಕ್ಷೇತ್ರಗಳ ಪೈಕಿ ಎಲ್ಲಿ ಸ್ಪರ್ಧೆಗೆ ನಿಲ್ಲುತ್ತಾರೆ ಎಂಬುದು ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ಇದರ ಬೆನ್ನಲ್ಲೆ ಸಿದ್ದರಾಮಯ್ಯ ಈ ಎರಡೂ ಕ್ಷೇತ್ರಗಳನ್ನು ಪಕ್ಕಕ್ಕಿಟ್ಟು ಈಗ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.ಕೋಲಾರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೊಂದಲವಿರುವ ನಡುವೆಯೇ ಸಿದ್ದರಾಮಯ್ಯ ಇದೀಗ ಬಾದಾಮಿ ಪ್ರವಾಸಕ್ಕೆ ಮುಂದಾಗುತ್ತಿದ್ದಾರೆ. ಶುಕ್ರವಾರ ಬಾದಾಮಿಗೆ ತೆರಳಲಿರುವ ಸಿದ್ದರಾಮಯ್ಯ ಅಲ್ಲಿ 500 ಕೋಟಿ ರೂ. ವೆಚ್ಚದ ಬಾದಾಮಿ-ಕೆರೂರು ಶಾಶ್ವತ ಕುಡಿಯವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ. ಸ್ವಕ್ಷೇತ್ರದಲ್ಲಿ ನಡೆಯಲಿರವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಬಾಗಿಯಾಗುವುದರಲ್ಲಿ ಯಾವುದೇ ವಿಶೇಷ ಇಲ್ಲ. ಆದರೆ ಈ ಕಾರ್ಯಕ್ರಮದ ಬಳಿಕ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರಾ ಎಂದು ಭಾರೀ ಕುತೂಹಲ ಮೂಡಿಸುತ್ತಿದೆ. .

Leave a Reply

Your email address will not be published. Required fields are marked *