ನೀಲಿಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್‌ಜೊತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ಟ್ರಂಪ್(76) ಅವರನ್ನು ಸ್ಥಳೀಯ ಪೊಲೀಸರು ಬಂಧನಕ್ಕೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಟ್ರಂಪ್‌ನಾನು ಸ್ಟರ್ಮಿ ಜೊತೆ ಯಾವುದೇ ನಂಟು ಹೊಂದಿಲ್ಲ. ನನ್ನ ಮೇಲಿನ ಆರೋಪ ಸಂಪೂರ್ಣ ರಾಜಕೀಯ ಪ್ರೇರಿತ. 2024ರ ಚುನಾವಣೆಯಲ್ಲಿ ನನ್ನ ಗೆಲುವನ್ನು ತಡೆಯಲು ಈ ತಂತ್ರ ರೂಪಿಸಲಾಗಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಪುತ್ರಿ ಈ ಹಿಂದೆ, ಹಾಲಿ ಅಮೆರಿಕ ಉಪಾಧ್ಯಕ್ಷೆ ಕಮಲ್ಯಾ ಹಾರಿಸ್‌ಪರ ಪ್ರಚಾರ ನಡೆಸಿದ್ದರು. ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಎಲ್ಲರೂ ಒಂದಾಗಿದ್ದಾರೆ ಎಂಬುದು ಟ್ರಂಪ್‌ವಾದ. ಆದರೆ ಅಮೆರಿಕ ಮಾಜಿ ಅಧ್ಯಕ್ಷ ಮತ್ತು ಗುಪ್ತಚರ ಸಂಸ್ಥೆಯ ಭದ್ರತೆ ಹೊಂದಿರುವ ಕಾರಣ ಟ್ರಂಪ್‌ಅವರನ್ನು ಜೈಲಿಗೆ ಕಳುಹಿಸದೇ ಬಿಟ್ಟು ಕಳುಹಿಸಲಾಯಿತು.