ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರ ಮೆರವಣಿಗೆ ಮಾಡಿರುವ ಘಟನೆ ಕೆನಡಾದಲ್ಲಿ ನಡೆದಿದೆ

1984 ಅಕ್ಟೋಬರ್‌31 ರಂದು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಧಾನಿಯ ಭದ್ರತಾ ಸಿಬ್ಬಂದಿಗಳೇ ಹತ್ಯೆ ಮಾಡಿದ್ದರು. ಆ ಸಂದರ್ಭವನ್ನು ಸ್ತಬ್ಧಚಿತ್ರದಲ್ಲಿ ಬಿಂಬಿಸಲಾಗಿತ್ತು. ಜೂ. 6 ರಂದು ‘ಆಪರೇಷನ್‌ಬ್ಲೂ ಸ್ಟಾರ್‌’ ಆಚರಣೆಗೂ ಮೊದಲು ಜೂ.4 ರಂದು ಖಲಿಸ್ತಾನಿ ಬೆಂಬಲಿಗರು ಪರೇಡ್‌ಆಯೋಜಿಸಿದ್ದರು. ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಕೊಲೆಗಾರರು ಹತ್ಯೆ ಮಾಡುತ್ತಿರುವ ಸಂದರ್ಭದ ಸ್ತಬ್ಧಚಿತ್ರ ನಿರ್ಮಿಸಲಾಗಿದೆ. ಆ ಸ್ತಬ್ಧಚಿತ್ರದಲ್ಲಿ “ಶ್ರೀ ದರ್ಬಾರ್ ಸಾಹಿಬ್ ಮೇಲಿನ ದಾಳಿಗೆ ಪ್ರತೀಕಾರ” ಎಂದು ಹೇಳುವ ಫಲಕ ಅಳವಡಿಸಲಾಗಿದೆ. “ಕೆನಡಾದಲ್ಲಿ ದ್ವೇಷ ಅಥವಾ ಹಿಂಸಾಚಾರವನ್ನು ವೈಭವೀಕರಿಸುವುದಕ್ಕೆ ಅವಕಾಶ ಇಲ್ಲ”. ಭಾರತದ ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯನ್ನು ಕೆನಡಾದಲ್ಲಿ ಆಚರಿಸಿದ ಘಟನೆಯ ವರದಿಗಳಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. ಕೆನಡಾದಲ್ಲಿ ದ್ವೇಷಕ್ಕೆ ಅಥವಾ ಹಿಂಸೆಯ ವೈಭವೀಕರಣಕ್ಕೆ ಸ್ಥಳವಿಲ್ಲ. ಈ ಚಟುವಟಿಕೆಗಳನ್ನು ನಾನು ಖಡಾಖಂಡಿತವಾಗಿ ಖಂಡಿಸುತ್ತೇನೆ ಎಂದು ಕ್ಯಾಮರೂನ್ ಮ್ಯಾಕೆ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *