ಗಡಿಯಾಚೆ ದಶಕಗಳಿಂದಲೂ ಪಾಕಿಸ್ತಾನ ಭಯೋತ್ಪಾದನೆಯನ್ನು ಯಾಕೆ ಇಲ್ಲಿಯವರೆಗೆ ಯುರೋಪ್‌ರಾಷ್ಟ್ರಗಳು ಖಂಡಿಸಿಲ್ಲ – ಜೈಶಂಕರ್‌ಪ್ರಶ್ನೆ

ಉಕ್ರೇನ್‌ ಮೇಲಿನ ಯುದ್ಧದ ವಿಚಾರದಲ್ಲಿ ಭಾರತದ ನಿರ್ಧಾರವನ್ನು ಯುರೋಪ್‌ರಾಷ್ಟ್ರಗಳು ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್‌ಮೊದಲ ಬಾರಿಗೆ ಪಾಕಿಸ್ತಾನದ ವಿಚಾರವನ್ನು ಪ್ರಸ್ತಾಪಿಸಿ ಯುರೋಪ್‌ರಾಷ್ಟ್ರಗಳ ಧೋರಣೆಯನ್ನು ಪ್ರಶ್ನಿಸಿ ಖಡಕ್‌ತಿರುಗೇಟು ನೀಡಿದ್ದಾರೆ. ಕೆಲವು ವರ್ಷಗಳ ಹಿಂದೆ ಭಾರತದ ಸಂಸತ್ತಿನ ಮೇಲೆ ಈ ದೇಶ ದಾಳಿ ಮಾಡಿತ್ತು. ವಿದೇಶಿಯರಿದ್ದ ಮುಂಬೈ ಹೋಟೆಲ್‌ಮೇಲೆ ದಾಳಿ ನಡೆಸಿತ್ತು. ಪ್ರತಿದಿನ ಗಡಿಯಾಚೆಗೆ ಭಯೋತ್ಪಾದಕರನ್ನು ಕಳುಹಿಸುತ್ತದೆ ಎಂದು ವಿದೇಶಾಂಗ ಸಚಿವರು ಪಾಕಿಸ್ತಾನವನ್ನು ದೂರಿದರು. ಉಪಗ್ರಹ ಚಿತ್ರದ ಮೂಲಕ ಗಡಿ ಭಾಗಕ್ಕೆ ಯಾರು ಮೊದಲು ಬಂದಿದ್ದಾರೆ ಎನ್ನುವುದು ದೃಢವಾಗುತ್ತದೆ. ಗಡಿಯಲ್ಲಿ ಸೇನೆಯನ್ನು ನಿಯೋಜಿಸಬಾರದು ಎಂದು ನಮ್ಮಿಬ್ಬರ ಮಧ್ಯೆ ಒಪ್ಪಂದ ಇದೆ. ಆದರೆ ಚೀನಾ ಆ ಒಪ್ಪಂದವನ್ನು ಪಾಲನೆ ಮಾಡದ ಕಾರಣ ಈಗ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಜೈಶಂಕರ್‌ಭಾರತದ ನಡೆಯನ್ನು ವಿಶ್ವ ವೇದಿಕೆಯಲ್ಲಿ ಸಮರ್ಥಿಸಿಕೊಳ್ಳುವುದು ಇದು ಮೊದಲನೆಯದ್ದಲ್ಲ. ಈ ಹಿಂದೆಯೂ ಸರಿಯಾಗಿ ಸಮರ್ಥಿಸಿ ತಿರುಗೇಟು ನೀಡಿದ್ದರು. ರಷ್ಯಾದಿಂದ ಭಾರತ ಮಾತ್ರ ತೈಲ ಖರೀದಿ ಮಾಡುತ್ತಿಲ್ಲ. ಯುರೋಪ್‌ಈಗಲೂ ಗ್ಯಾಸ್‌ಖರೀದಿ ಮಾಡುತ್ತಿದೆ. ಹೀಗಿದ್ದರೂ ಭಾರತ ಮಾತ್ರ ಟಾರ್ಗೆಟ್‌ಯಾಕೆ ಎಂದು ಪ್ರಶ್ನಿಸಿದ್ದರು. ತೈಲವನ್ನುಆಮದು ಮಾಡಿಕೊಳ್ಳುವ ಮೂಲಕ ರಷ್ಯಾ ಯುದ್ಧಕ್ಕೆ ನಿಧಿ ನೀಡಿದಂತಾಗುತ್ತದೆ ಎಂಬ ಪ್ರಶ್ನೆಗೆ, ಭಾರತ ತೈಲ ಖರೀದಿಸಿ ರಷ್ಯಾಗೆ ಸಹಾಯ ಮಾಡುತ್ತದೆ ಎಂದಾದರೆ ರಷ್ಯಾದಿಂದ ಗ್ಯಾಸ್‌ಖರೀದಿಸುತ್ತಿರುವ ಯುರೋಪ್‌ದೇಶಗಳು ಯುದ್ಧಕ್ಕೆ ನಿಧಿ ನೀಡಿದಂತೆ ಆಗುವುದಿಲ್ಲವೇ ಎಂದು ಮರು ಪ್ರಶ್ನೆ ಹಾಕಿ ಪ್ರಶ್ನೆ ಕೇಳಿದವರ ಬಾಯಿ ಮುಚ್ಚಿಸಿದ್ದರು.

Leave a Reply

Your email address will not be published. Required fields are marked *