ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಹಿರಿಯ ವಕೀಲರಾದ ಮುಕುಲ್‌ರೋಹಟಗಿ ಅವರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿಗಳು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರನ್ನೂ ಕಾಣುವ ನಿರೀಕ್ಷೆಯಿದೆ.