ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ಶಾ ನೇತೃತ್ವದಲ್ಲಿ ಉಭಯ ಸಿಎಂಗಳ ಸಭೆ ನಡೆಸಲಾಗಿತ್ತು. ಇತ್ತ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಕರ್ನಾಟಕ, ಮಹಾರಾಷ್ಟ್ರ ಎರಡೂ ರಾಜ್ಯಗಳು ಪರಸ್ಪರ ಪ್ರದೇಶಗಳ ಬೇಡಿಕೆ ಇಡಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದರು. ಆದರೆ, ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆಗೂ ಕ್ಯಾರೇ ಎನ್ನದ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ಹಸನ್ ಮುಶ್ರಿಫ್ ವಿಧಾನಸಭೆ ಕಲಾಪದಲ್ಲಿ ನಾಡದ್ರೋಹಿ ಘೋಷಣೆ ಬರಹದ ಟೋಪಿ ಧರಿಸಿ ವಿಧಾನಸಭೆ ಕಲಾಪಕ್ಕೆ ಹಾಜರಾಗಿದ್ದಾರೆ.