ರಾಯಗಢದ ಹರಿಹರೇಶ್ವರ ಬೀಚ್ ಬಳಿ ಬೋಟ್ ಪತ್ತೆ ಆಗಿದ್ದು, ಅದರಲ್ಲಿ ಅನೇಕ ಮದ್ದುಗುಂಡುಗಳು ಹಾಗೂ 3 ಎಕೆ 47 ರೈಫೆಲ್‍ಗಳು ಪತ್ತೆಯಾಗಿವೆ. ಈ ಎಲ್ಲಾ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆ ಪ್ರದೇಶವನ್ನು ಹೈಅಲರ್ಟ್ ಘೋಷಿಸಿ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ದೋಣಿ ಪತ್ತೆಯಾದ ಸ್ಥಳವು ಮುಂಬೈನಿಂದ 200ಕಿ.ಮೀ ಹಾಗೂ ಪುಣೆಯಿಂದ 120 ಕಿ.ಮೀ ದೂರದಲ್ಲಿದ್ದು, ಗಣೇಶ ಹಬ್ಬಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಇರುವಾಗಲೇ ಶಸ್ತ್ರಾಸ್ತ್ರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ 26/11 ಮುಂಬೈ ದಾಳಿ ಮಾದರಿಯಲ್ಲಿಯೇ ಮತ್ತೊಂದು ದಾಳಿ ನಡೆಸುವ ಯೋಜನೆ ಇದು ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ಈ ಬೋಟ್‍ನ ನೋದಾಯಿತ ಸಂಖ್ಯೆಯು ಇಂಗ್ಲೆಂಡ್ ಸೇರಿದೆ.