ಗುಜರಾತ್‌ನಲ್ಲಿ ಮುಂದಿನ 5 ವರ್ಷಗಳಲ್ಲಿ ಹಸಿರು ಇಂಧನ ಮತ್ತು ನವೀಕರಿಸಬಹುದಾದ ವಲಯಗಳಲ್ಲಿ 2 ಲಕ್ಷ ಕೋಟಿ ರೂಪಾಯಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಠಿ – ಗೌತಮ್ ಅದಾನಿ ಘೋಷಣೆ

ಗುಜರಾತ್‌ನಲ್ಲಿ ಮುಂದಿನ 5 ವರ್ಷಗಳಲ್ಲಿ ಹಸಿರು ಇಂಧನ ಮತ್ತು ನವೀಕರಿಸಬಹುದಾದ ವಲಯಗಳಲ್ಲಿ 2 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಯೋಜನೆಯನ್ನು ಅದಾನಿ ಗ್ರೂಪ್ ಬಹಿರಂಗಪಡಿಸಿದೆ. ವೈಬ್ರಂಟ್ ಗುಜರಾತ್ ಶೃಂಗಸಭೆಯ ಕುರಿತು ಮಾತನಾಡಿದ ಅದಾನಿ, ವೈಬ್ರಂಟ್ ಗುಜರಾತ್ ಪಿಎಂ ಮೋದಿ ಅವರ ಅಸಾಧಾರಣ ದೃಷ್ಟಿಕೋನದ ಅದ್ಭುತ ಅಭಿವ್ಯಕ್ತಿಯಾಗಿದೆ. ಸ್ವಚ್ಛ ಮತ್ತು ಹೆಚ್ಚು ಸುಸ್ಥಿರ ಇಂಧನ ಭವಿಷ್ಯದ ಭಾರತದ ಪರಿವರ್ತನೆಯಲ್ಲಿ ಪ್ರಮುಖ ಭಾಗವಾಗಿ ಇರಿಸುವ ಮಹತ್ವಾಕಾಂಕ್ಷೆಯ ಹೂಡಿಕೆ ತಂತ್ರವನ್ನು ವಿವರಿಸಿದರು. ನಾವು ಆತ್ಮನಿರ್ಭರ ಭಾರತಕ್ಕಾಗಿ ಗ್ರೀನ್ ಎನರ್ಜಿ ಪೂರೈಕೆ ಸರಪಳಿಯನ್ನು ವಿಸ್ತರಿಸುತ್ತಿದ್ದೇವೆ. ಅತಿದೊಡ್ಡ ನವೀಕರಿಸಬಹುದಾದ ಇಂಧನ ವ್ಯವಸ್ಥೆಯನ್ನು ರಚಿಸುತ್ತಿದ್ದೇವೆ, ಮುಂದಿನ 5 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಮಾಡಲಿದೆ ಎಂದು ಹೇಳಿದ್ದರು. ಈ ಹೂಡಿಕೆಯು ಆವಿಷ್ಕಾರಗಳನ್ನು ಹೆಚ್ಚಿಸಲು, ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ಗುಜರಾತ್‌ನಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಬೆಳವಣಿಗೆಗೆ ಗಮನಾರ್ಹವಾಗಿ ಕೊಡುಗೆ ನೀಡಲು ನಾವು ಸಿದ್ಧವಾಗಿದೆ. ಈ ಹೂಡಿಕೆಯು ನೇರವಾಗಿ ಮತ್ತು ಪರೋಕ್ಷವಾಗಿ 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಗೌತಮ್ ಅದಾನಿ ಹೇಳಿದರು.

Leave a Reply

Your email address will not be published. Required fields are marked *