ಗುಜರಾತ್ನ ಮೊರ್ಬಿಯ ಮಚ್ಚು ನದಿಯ ತೂಗು ಸೇತುವೆ ಕುಸಿದು 132 ಮಂದಿ ಸಾವಿಗೀಡಾಗಿದ್ದಾರೆ. ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. 2016ರಲ್ಲಿ ಕೋಲ್ಕತ್ತಾದಲ್ಲಿ ಸೇತುವೆ ಕುಸಿದಿದ್ದಾಗ ಅವರಾಡಿದ್ದ ಮಾತುಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಿರುಗೇಟು ನೀಡಿದ್ದಾರೆ. ಗುಜರಾತ್ ಸೇತುವೆ ಕುಸಿತದ ಬಗ್ಗೆ ತೀವ್ರ ಆಕ್ರೋಶದ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ವಿಡಿಯೋ ವೈರಲ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಸೇತುವೆಯೊಂದು ಕುಸಿದು ಬಿದ್ದಾಗ ಪ್ರಧಾನಿ ಮಾಡಿದ ‘ದೇವರ ಕೃತ್ಯವೇ ಅಥವಾ ವಂಚನೆಯ ಕೃತ್ಯವೇ? ಎಂಬ ಭಾಷಣ ನನಗೆ ನೆನಪಾಗುತ್ತಿದೆ. ಅವರ ಸಂವೇದನಾಶೀಲತೆಯಿಲ್ಲದ ವಿಡಿಯೋವನ್ನು ಹಂಚಿಕೊಳ್ಳುತ್ತಿಲ್ಲ” ಎಂದು ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.