ಗುಜರಾತ್ ವಿಧಾನಸಭೆ ಚುನಾವಣೆ 2022 ರ ಮೊದಲ ಹಂತದ ಮತದಾನ ಇಂದು ಮತಕಟ್ಟೆಗಳಲ್ಲಿ ಬಿಗಿ ಭದ್ರತೆ

ಗುಜರಾತ್ ವಿಧಾನಸಭೆ ಚುನಾವಣೆ 2022 ರ ಮೊದಲ ಹಂತದ ಮತದಾನ ಆರಂಭಗೊಂಡಿದೆ. ಇಂದು 788 ಅಭ್ಯರ್ಥಿಗಳ ಭವಿಷ್ಯ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಲಾಕ್. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ನೂರಾರು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ಮತದಾನ ಗುರುವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ 19 ಜಿಲ್ಲೆಗಳಲ್ಲಿ ಹರಡಿರುವ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗದ ಪ್ರಕಾರ ಸಂಜೆ 5 ಗಂಟೆಗೆ ಮತದಾನ ಮುಕ್ತಾಯವಾಗಲಿದೆ. ಗುಜರಾತ್ ಚುನಾವಣೆಯಲ್ಲಿ ಒಟ್ಟು 39 ರಾಜಕೀಯ ಪಕ್ಷಗಳು ಸ್ಪರ್ಧಿಸುತ್ತಿವೆ. ಮೊದಲ ಹಂತದಲ್ಲಿ 788 ಅಭ್ಯರ್ಥಿಗಳ ಪೈಕಿ 718 ಪುರುಷ ಅಭ್ಯರ್ಥಿಗಳು ಮತ್ತು 70 ಮಹಿಳಾ ಅಭ್ಯರ್ಥಿಗಳು ಇದ್ದಾರೆ. ಒಟ್ಟು 2,39,76,670 ಮತದಾರರು ಮತದಾನ ಮಾಡಲಿದ್ದಾರೆ. ಇವರಲ್ಲಿ 1,24,33,362 ಪುರುಷರು, 1,1,5,42,811 ಮಹಿಳೆಯರು ಮತ್ತು 497 ತೃತೀಯಲಿಂಗಿಗಳಿದ್ದಾರೆ. 4 ಲಕ್ಷಕ್ಕೂ ಹೆಚ್ಚು ಅಂಗವಿಕಲ ಮತದಾರರು ಸಹ ಮತ ಚಲಾಯಿಸಲು ಅರ್ಹರಾಗಿದ್ದಾರೆ.

Leave a Reply

Your email address will not be published. Required fields are marked *