ಚಿಕ್ಕಮಗಳೂರು ಜಿಲ್ಲಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳು ಪ್ರವಾಸೋದ್ಯಮದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಅವಕಾಶಗಳು ಇವೆ. ಅದ್ದರಿಂದ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಸ್ವಿಜರ್‌ಲ್ಯಾಂಡ್‌ಮಾದರಿಯಲ್ಲಿ ಈ ಎರಡು ಜಿಲ್ಲೆಗಳನ್ನು ಪ್ರವಾಸೋದ್ಯಮದಲ್ಲಿ ಬೆಳೆಸಬೇಕೆಂಬ ಇಚ್ಛೆ ನನ್ನದಾಗಿದೆ .ಇದಕ್ಕೆ ಬೇಕಾಗುವಷ್ಟು ಹಣವನ್ನು ಕೊಡುತ್ತೇನೆ. ತಡ ಮಾಡದೆ ಕೂಡಲೇ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು. ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ‘ಹೆಲಿ ಟೂರಿಸಂ’ ಗಾಗಿ ಒಟ್ಟು 30 ಕೋಟಿ ರುಪಾಯಿ ಕೊಟ್ಟಿದ್ದೇನೆ. ಇಲ್ಲಿ ಏರ್‌ಸ್ಟ್ರೀಪ್ ನಿರ್ಮಾಣಕ್ಕೆ 40 ಎಕರೆ ಭೂ ಸ್ವಾಧೀನ ಮಾಡಿಕೊಳ್ಳಬೇಕಾಗಿದ್ದು, ಅದಕ್ಕೆ ಬೇಕಾದ ಹಣವನ್ನು ಮಂಜೂರು ಮಾಡುತ್ತೇನೆ. ಮುಂದಿನ ಚಿಕ್ಕಮಗಳೂರು ಹಬ್ಬದೊಳಗೆ ಈ ಕೆಲಸ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.