ಬೆಂಗಳೂರಿನಲ್ಲಿ ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆ ವಿರುದ್ಧ ಹಲಸೂರು ಗೇಟ್‌ಮತ್ತು ಕಾಡುಗೋಡಿ ಪೊಲೀಸ್‌ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಈ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಚಿಲುಮೆ ಸಂಸ್ಥೆಯ ನಿರ್ದೇಶಕ ಸೇರಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಇದೇ ವೇಳೆ ಬಿಬಿಎಂಪಿ ಹಾಗೂ ಚಿಲುಮೆ ಸಂಸ್ಥೆಯ ಕಚೇರಿಯ ಕೆಲವು ಮಹತ್ವದ ದಾಖಲೆಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಚಿಲುಮೆ ಸಂಸ್ಥೆಯ ನಿರ್ದೇಶಕ ರೇಣುಕಾ ಪ್ರಸಾದ್ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ಧರ್ಮೇಶ್‌ರನ್ನ ಬಂಧಿಸಿದ್ದು, ಮತ್ತಿಬ್ಬರು ಸಿಬ್ಬಂದಿಯನ್ನು ವಿಚಾರಣೆ ನಡೆಸಿ ಪೊಲೀಸರು ಕಳುಹಿಸಿದ್ದಾರೆ. ಈ ಸಂಸ್ಥೆಯ ಆಡಳಿತಾಧಿಕಾರಿಗಳು ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.