ಸೆಪ್ಟೆಂಬರ್ 9-10 ರಂದು ನವದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಜಿನ್‌ಪಿಂಗ್ ಬದಲು ಚೀನಾದ ಪ್ರತಿನಿಧಿಯಾಗಿ ಲಿ ಕಿಯಾಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ. ಜಿ20 ಶೃಂಗಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಭಾಗವಹಿಸುವುದಕ್ಕೆ ಸಂಬಂಧಪಟ್ಟಂತೆ ಭಾರತ ಹಾಗೂ ಚೀನಾದ ವಿದೇಶಾಂಗ ಸಚಿವಾಲಯಗಳ ವಕ್ತಾರರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೆಲ ದಿನಗಳ ಹಿಂದಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ತಮ್ಮ ಮೇಲೆ ವಾರಂಟ್ ಹೊರಡಿಸಿರುವ ಹಿನ್ನೆಲೆ ಜಿ20 ಶೃಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿಸಿದ್ದಾರೆ. ತಮ್ಮ ಬದಲು ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೋವ್ ಅವರನ್ನು ಕಳುಹಿಸುವುದಾಗಿ ಘೋಷಿಸಿದ್ದಾರೆ.