ಚೀನಾ-ಭಾರತದ ಗಡಿ ಪರಿಸ್ಥಿತಿಯು ಒಟ್ಟಾರೆ ಸ್ಥಿರವಾಗಿದೆ.: ಚೀನಾ ಪ್ರತಿಕ್ರಿಯೆ

ಕಳೆದ ವಾರ ಅರುಣಾಚಲ ಪ್ರದೇಶದ ತವಾಂಗ್‍ನಲ್ಲಿ ಚೀನಾ ಘರ್ಷಣೆ ನಡೆಸಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ ನಂತರ ಈ ಹೇಳಿಕೆಯನ್ನು ಚೀನಾ ಸರ್ಕಾರ ನೀಡಿದೆ. ಚೀನಾ-ಭಾರತದ ಗಡಿ ಪರಿಸ್ಥಿತಿಯು ಒಟ್ಟಾರೆ ಸ್ಥಿರವಾಗಿದೆ. ಎರಡೂ ಕಡೆಯ ಸಚಿವರು ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಗಡಿ ಸಮಸ್ಯೆಯ ಬಗ್ಗೆ ಅಡೆತಡೆಯಿಲ್ಲದ ಮಾತುಕತೆಯನ್ನು ನಡೆಸಿದ್ದೇವೆ. ಎರಡೂ ಕಡೆಯವರು ಸಹಿ ಮಾಡಿದ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಟ್ಟಾಗಿ ಚೀನಾ-ಭಾರತದ ಗಡಿ ಪ್ರದೇಶದ ಶಾಂತಿ ಮತ್ತು ನೆಮ್ಮದಿಯನ್ನು ಎತ್ತಿಹಿಡಿಯಬೇಕು ಎಂದು ತಿಳಿಸಿದರು. ತವಾಂಗ್ ಸೆಕ್ಟರ್‌ನಲ್ಲಿ ಡಿಸೆಂಬರ್ 9ರ ಬೆಳಗ್ಗೆ ಗಡಿ ಕಾಯುತ್ತಿದ್ದ ಭಾರತ ಸೈನಿಕರನ್ನು ಚೀನಿ ಯೋಧರು ಕೆಣಕಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತದ ಸೈನಿಕರು ತಿರುಗೇಟು ನೀಡಿದ್ದು, ಎರಡು ಕಡೆ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಎರಡು ಕಡೆಯಲ್ಲೂ ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿತ್ತು.

Leave a Reply

Your email address will not be published. Required fields are marked *