ರಾಜ್ಯದಲ್ಲಿ ಪ್ರತಿಬಾರಿ ಚುನಾವಣೆ ಬಂದ ಸಂದರ್ಭದಲ್ಲಿ ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯದ ಕಾರ್ಯಗಳಿಗೆ ನಿಯೋಜನೆ ಮಾಡುವುದು ಸಾಮಾನ್ಯವಾಗಿದೆ. ಚುನಾವಣಾ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ಅವಕಾಶವೂ ಕೂಡ ಇದೆ. ಆದರೆ, ಸರ್ಕಾರಿ ಅಧಿಕಾರಿಗಳು ವಿವಿಧ ನೆಪಗಳನ್ನು ಹೇಳಿಕೊಂಡು ಚುನಾವಣಾ ಕರ್ತವ್ಯಕ್ಕೆ ಹಾಜರಾಗದೇ ಗೈರು ಹಾಜರಾಗುತ್ತಾರೆ. ಇದರಿಂದ ಚುನಾವಣಾ ಕಾರ್ಯಗಳನ್ನು ನಡೆಸಲು ಆಯೋಗವು ಪರದಾಡಬೇಕಾಗುತ್ತದೆ. ಆದರೆ, ಕಳೆದ ಏ.20ರಂದು ಚುನಾವಣಾ ತರಬೇತಿಗೆ ಹಾಜರಾಗದ ಸರ್ಕಾರಿ ನೌಕರರಿಗೆ ಈಗಾಗಲೇ ನೋಟಿಸ್‌ಜಾರಿಗೊಳಿಸಲಾಗಿದೆ. ಗೈರಾಗಿದ್ದ ಸರ್ಕಾರಿ ನೌಕರರಿಗೆ ಇನ್ನೊಂದು ಅವಕಾಶವನ್ನು ನೀಡಲಾಗುತ್ತಿದ್ದು, ಏ.25ರಂದು ನಡೆಸಲಾಗುವ ತರಬೇತಿಗೆ ಹಾಜರಾಗದಿದ್ದರೆ ಎಫ್‌ಐಆರ್‌ದಾಖಲಿಸುವುದಾಗಿ ಖಡಕ್‌ಎಚ್ಚರಿಕೆಯನ್ನು ರವಾನಿಸಲಾಗಿದೆ.