2023 ರ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಸಮಯದಲ್ಲಿ ಎಲ್ಲಾ ಸಮುದಾಯಗಳ ಮತಗಳನ್ನ ಸೆಳೆಯಲು ಹಲವು ನಿಗಮ ಮಂಡಳಿ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದು.
ಈಗಾಗಲೇ ಅಬ್ಬರ ಪ್ರಚಾರವನ್ನ ನಡೆಸುತ್ತಿರುವ ಬಸರಾಜ ಬೊಮ್ಮಾಯಿ ರಾಜ್ಯ ಸರ್ಕಾರ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ವಿವಿಧ ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತಾ, ಆಯಾ ಸಮುದಾಯಗಳ ಮತ ಸೆಳೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ಲಾನ್‌ಮಾಡಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕೃತ ಟ್ವೀಟರ್ ಮತ್ತು ಫೇಸ್ ಬುಕ್ ಅಕೌಂಟ್ ಗಳಲ್ಲಿ ಅದೇಶದ ಪ್ರತಿಗಳನ್ನು ಪ್ರಕಟಿಸಿದ್ದಾರೆ.